ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅವಕಾಶ ನೀಡಿದ್ದು, ಇದರ ಜೊತೆಗೆ ಇನ್ನಷ್ಟು ಆಕರ್ಷಣೀಯವಾದ ಸೌಲಭ್ಯಗಳನ್ನು ಹೆಚ್ಚಿಸಿದೆ.
ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ವಂದೇ ಭಾರತ್ ಸ್ಲೀಪರ್ ಕೋಚ್‌ಗಳ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹೊಸ ವಂದೇ ಭಾರತ್ ರೈಲುಗಳು ಮುಂದಿನ ವರ್ಷದಿಂದ ಸೇವೆಗೆ ಲಭ್ಯವಾಗಲಿವೆ.
ವಂದೇ ಭಾರತ್ ಕಾನ್ಸೆಪ್ಟ್‌ನ ಸ್ಲೀಪರ್ ಆವೃತ್ತಿ ರೈಲು ಶೀಘ್ರದಲ್ಲೇ ಬರಲಿದೆ 2024 ರ ಆರಂಭದಲ್ಲಿ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.
Concept train – Vande Bharat (sleeper version)
Coming soon… early 2024 pic.twitter.com/OPuGzB4pAk
— Ashwini Vaishnaw (@AshwiniVaishnaw) October 3, 2023
ವಂದೇ ಭಾರತ್ ಸ್ಲೀಪರ್ ಕೋಚ್‌ಗಳು ಈಗಾಗಲೇ ವಿಶಾಲವಾದ ಬರ್ತ್‌ಗಳು, ಸುಂದರವಾದ ಒಳಾಂಗಣಗಳು, ವಿಶಾಲವಾದ ಶೌಚಾಲಯಗಳು, ಮಿನಿ ಪ್ಯಾಂಟ್ರಿ ಮತ್ತು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳ ಕಾರಣಕ್ಕೆ ಪ್ರಸಿದ್ಧಿಯಲ್ಲಿದೆ.ಹೊಸ ರೈಲುಗಳು ಪ್ರಸ್ತುತ ಕೋಚ್‌ಗಳಿಗಿಂತ ಹೆಚ್ಚು ಸಮರ್ಥವಾಗಿದ್ದು, ಪರಿಸರ ಸ್ನೇಹಿಯಾಗಿರುತ್ತವೆ ಎಂದು ನಿರೀಕ್ಷಿಸಲಾಗಿದೆ.
ಪ್ರಗತಿಪರ ಮತ್ತು ಸ್ವಾವಲಂಬಿ ಭಾರತದ ಸಂಕೇತವೆನಿಸಿರುವ ಸ್ಥಳೀಯ ಹೈ ಸ್ಪೀಡ್ ರೈಲು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ, ಹಾಗೂ ಸೇವೆ ಈ ರೈಲಿನ ಹಾಲ್‌ಮಾರ್ಕ್ ಆಗಲಿದೆ.
ವಿಶ್ವದರ್ಜೆಯ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಭರವಸೆ ನೀಡುತ್ತದೆ.