Saturday, June 25, 2022

Latest Posts

ತೆಲುಗುನಲ್ಲಿ ‘ಕೋಟಿಗೊಬ್ಬ 3’ ರಿಲೀಸ್ ಯಾವಾಗ ಗೊತ್ತಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅ. 15ರಂದು ತೆರೆ ಕಂಡು ಯಶಸ್ವಿ ಪ್ರದರ್ಶನ ಕಂಡಿರುವ ಕೋಟಿಗೊಬ್ಬ 3 ಸಿನಿಮಾ  ಬಾಕ್ಸಾಫೀಸ್​ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಅಭಿಮಾನಿಗಳು ಸಿನೆಮಾ ನೋಡಿ ಸಕ್ಕತ್ ಎಂಜಾಯ್ ಮಾಡಿದ್ದಾರೆ.

ಕೋಟಿಗೊಬ್ಬ 3’ ಮೊದಲ ದಿನವೇ ಅಂದಾಜು  12 ಕೋಟಿ ರೂ.ನಷ್ಟು ಹಣ ಗಳಿಸಿತ್ತು ಎಂದು ವರದಿಗಳು ಹರಿದಾಡಿದ್ದವು. ಪ್ರಸ್ತುತ ಚಿತ್ರತಂಡದಿಂದ ಅಧಿಕೃತ ಲೆಕ್ಕ ಬಿಡುಗಡೆಯಾಗಿದ್ದು, 4 ದಿನಕ್ಕೆ 40.5 ಕೋಟಿ ರೂ. ಗಳಿಸುವುದರೊಂದಿಗೆ ಯಶಸ್ಸು ಕಂಡಿದೆ.

ಇದೀಗ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ನವೆಂಬರ್ ನಲ್ಲಿ ತೆಲುಗಿನಲ್ಲಿ ರಿಲೀಸ್ ಮಾಡಲು ನಿರ್ಧರಿಸಿದೆ. ಶೀಘ್ರವೇ ಸಿನಿಮಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರ ತಂಡ ತಿಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss