ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಣೆ ಮಾಡಿದೆ. ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ರಿಸಲ್ಟ್ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಸಿಕ್ಕಿದೆ.
ಕಳೆದ ಬಾರಿ 14ನೇ ಸ್ಥಾನದಲ್ಲಿದ್ದ ಉಡುಪಿ ಈ ಬಾರಿ 94% ಮೊದಲನೇ ಸ್ಥಾನ ಪಡೆದಿದೆ.
ಕಳೆದ ಬಾರಿ 17ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಈ ಬಾರಿ 92.12%ನೊಂದಿಗೆ ಎರಡನೇ ಸ್ಥಾನ ಪಡೆದಿದೆ.
ಕಳೆದ ಬಾರಿ 28ನೇ ಸ್ಥಾನದಲ್ಲಿದ್ದ ಶಿವಮೊಗ್ಗ ಇದೀಗ 88.67%ನೊಂದಿಗೆ ಮೂರನೇ ಸ್ಥಾನ ಗಳಿಸಿದೆ.
ಇನ್ನು ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ 88.67ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಕಳೆದ ಬಾರಿ 12ನೇ ಸ್ಥಾನದಲ್ಲಿದ್ದ ಉತ್ತರ ಕನ್ನಡ ಈ ಬಾರಿ 86.28%ನೊಂದಿಗೆ ಐದನೇ ಸ್ಥಾನದಲ್ಲಿದೆ.
ಕಳೆದ ಬಾರಿ ಹಾಗೂ ಈ ಬಾರಿ ಕೂಡ ಯಾದಗಿರಿ ಕಡೆಯ ಸ್ಥಾನದಲ್ಲಿದೆ.