ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿಯವರನ್ನು ನೇಮಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶದ ಪ್ರಕಾರ ಈ ಆಯ್ಕೆ ಮಾಡಲಾಗಿದೆ.
ನಿಧಿ ತಿವಾರಿ ಯಾರು?
ಮೂಲತಃ ಉತ್ತರ ಪ್ರದೇಶದ ವಾರಣಾಸಿಯ ಮೆಹಮುರ್ಗಂಜ್ನವರಾದ ತಿವಾರಿ ಆಡಳಿತ ಮತ್ತು ರಾಜತಾಂತ್ರಿಕತೆಯಲ್ಲಿ ಸ್ಥಿರವಾಗಿ ವೃತ್ತಿಜೀವನವನ್ನು ನಿರ್ಮಿಸಿಕೊಂಡಿದ್ದಾರೆ. ನಿಧಿ ಪ್ರಸ್ತುತ ಪ್ರಧಾನಮಂತ್ರಿ ಕಚೇರಿಯಲ್ಲಿ (ಪಿಎಂಒ) ಡೆಪ್ಯೂಟಿ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ನವೆಂಬರ್ 2022 ರಲ್ಲಿ ಪಿಎಂಒಗೆ ನೇಮಿಸಲಾಗಿತ್ತು. ಈ ಹಿಂದೆ, ವಿದೇಶಾಂಗ ಸಚಿವಾಲಯದಲ್ಲಿ (ಎಂಇಎ) ನಿಶ್ಯಸ್ತ್ರೀಕರಣ ಮತ್ತು ಅಂತಾರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.