ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.