ದೊಡ್ಡ ಪಾತ್ರೆಯೊಂದರಲ್ಲಿ ಅಜ್ಜಿಯನ್ನು ಕೂರಿಸಿ ನದಿಯಲ್ಲಿ ತೇಲಿಬಿಟ್ಟ ಗ್ರಾಮಸ್ಥರು, ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೊಡ್ಡ ಪಾತ್ರೆಯೊಂದರಲ್ಲಿ ಅಜ್ಜಿಯನ್ನು ಕೂರಿಸಿ  ಗ್ರಾಮಸ್ಥರು ನದಿಯಲ್ಲಿ ತೇಲಿಬಿಟ್ಟಿದ್ದಾರೆ, ಯಾಕೆ ಗೊತ್ತಾ?

ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದೆಯನ್ನು ದೊಡ್ಡ ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ಪ್ರವಾಹದ ಹೊಳೆಯನ್ನು ದಾಟಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೇಡದ ಜಾಮಿಗುಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹಿರಿಯ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ತುರ್ತಾಗಿ ಭೇಟಿ ನೀಡಬೇಕಾಗಿತ್ತು.

ಆದರೆ, ನಿರಂತರ ಮಳೆಯಿಂದಾಗಿ ಗ್ರಾಮವು ಜಿಲ್ಲೆಯಿಂದ ಸಂಪರ್ಕ ಕಡಿತಗೊಂಡಿದ್ದರಿಂದ ಆಕೆಗೆ ಪ್ರಯಾಣಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗ್ರಾಮಸ್ಥರು ಮಹಿಳೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ಪ್ರವಾಹದ ಹೊಳೆಯನ್ನು ದಾಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!