ಎಲ್ಲೆಂದರಲ್ಲಿ ಗಾಡಿ ನಿಲ್ಲಿಸಿ ಹೋಗ್ತೀರಾ? ಶೀಘ್ರದಲ್ಲೇ ಟೋಯಿಂಗ್‌ ಆರಂಭ? ಸಚಿವರು ಹೇಳೋದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ವಾಹನ ಮಾಲೀಕರು, ದ್ವಿಚಕ್ರ ವಾಹನ ಸವಾರರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಶಾಕಿಂಗ್ ಸುದ್ದಿ ನೀಡಿದ್ದಾರೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.  ಸಂಚಾರದಟ್ಟಣೆ ಹೆಚ್ಚು ಇರುವ ಕೆಲವು ರಸ್ತೆಗಳಲ್ಲಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಚಿಂತನೆ ನಡೆಸಿದ್ದೇವೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಅಗತ್ಯ ಇದ್ದಲ್ಲಿ ಇನ್ನಷ್ಟು ಟ್ರಾಫಿಕ್ ಪೊಲೀಸ್ ಸ್ಟೇಷನ್​ಗಳನ್ನು ಆರಂಭಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಡೆಲಿವರಿ ಬಾಯ್ ಒಬ್ಬ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಟೋಯಿಂಗ್ ಮಾಡಲಾಗಿದ್ದು, ಆತ ತನ್ನ ವಾಹನ ಬಿಡಿಸಿಕೊಳ್ಳಲು ಟೋಯಿಂಗ್‌ ವಾಹನದ ಹಿಂದೆ ಓಡುವ ವಿಡಿಯೋ 2022ರ ಆರಂಭದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆಗ ಟ್ರಾಫಿಕ್ ಪೊಲೀಸರು ಹಾಗೂ ಟೋಯಿಂಗ್‌ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಾಹನಗಳನ್ನು ಸುಖಾಸುಮ್ಮನೆ ಟೋಯಿಂಗ್‌ ವಾಹನದಲ್ಲಿ ಎತ್ತಿಕೊಂಡು ಹೋಗಿ ದಂಡ ವಿಧಿಸಲಾಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ನಂತರ ಸರ್ಕಾರ ಟೋಯಿಂಗ್ ಸ್ಥಗಿತಗೊಳಿಸಿತ್ತು. ಅದರ ಬದಲಿಗೆ, ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿರುವ ವಾಹನಕ್ಕೆ ವ್ಹೀಲ್ ಕ್ಲ್ಯಾಂಪ್ ಅಳವಡಿಸಿ ವಾಹನ ಮಾಲೀಕರು ಬಂದ ಬಳಿಕ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆ ಅನುಸರಿಸಲಾಗುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!