ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎಚ್.ಡಿ. ಕುಮಾರಸ್ವಾಮಿ ಮಂತ್ರಿಸ್ಥಾನದ ಆಕಾಂಕ್ಷಿ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ. ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯವಿದೆ, ಅದನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.