ಸಾಮಾಗ್ರಿಗಳು
ಹಾಲಿನ ಪುಡಿ
ಸಕ್ಕರೆ ಪುಡಿ
ತುಪ್ಪ
ಹಾಲು
ಏಲಕ್ಕಿ ಪುಡಿ
ಮಾಡುವ ವಿಧಾನ
ಮೊದಲು ಒಂದು ಪ್ಯಾನ್ ನಲ್ಲಿ 1 ಚಮಚ ತುಪ್ಪ ಹಾಕಿ ಕರಗಿಸಿ ನಂತರ ಹಾಲು ಸಕ್ಕರೆ ಪುಡಿ ಹಾಕಿ. ಸಕ್ಕರೆ ಕರಗಿದ ಮೇಲೆ ಹಾಲಿನ ಪುಡಿ, ಏಲಕ್ಕಿ ಪುಡಿ ಉದುರಿಸಿ ಚೆನ್ನಾಗಿ ಗಂಟಾಗದ ಹಾಗೆ ಕೈಯಾಡಿಸಿ.
ಮತ್ತೊಂದು ಚಮಚ ತುಪ್ಪ ಹಾಕಿ ತಳ ಬಿಡುವವರೆಗೂ ಮಿಶ್ರಣ ಮಾಡುತ್ತಲೇ ಇರಿ. ನಂತರ ಗ್ಯಾಸ್ ಆಫ್ ಮಾಡಿ ತಣ್ಣಗಾಗಲು ಬಿಡಿ.
ಕೈಗೆ ತುಪ್ಪ ಸವರಿಕೊಂಡು ಚಿಕ್ಕ ಚಿಕ್ಕ ಉಂಡೆ ಮಾಡಿ ಪೇಡ ಬೇಕಾದ ಆಕಾರದಲ್ಲಿ ಕಟ್ ಮಾಡಿದ್ರೆ ಪೇಡಾ ರೆಡಿ