ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಬಾಲಿವುಡ್ ಸಿನಿಮಾ ‘ವಾಕ್ಸಿನ್ ವಾರ್’ ಪ್ರೇಕ್ಷಕರಿಗೆ ಭರ್ಜರಿ ಆಫರ್ ಕೊಟ್ಟಿದ್ದಾರೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಾಕ್ಸಿನ್ ವಾರ್ ಚಿತ್ರ ನೋಡುವವರಿಗೆ ಒಂದು ಟಿಕೆಟ್ ತೆಗೆದುಕೊಂಡರೆ ಮತ್ತೊಂದು ಫ್ರೀ ಎಂಬ ಅಚ್ಚರಿಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಘೋಷಿಸಿರುವ ‘ವಾಕ್ಸಿನ್ ವಾರ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾಗೆ ಪ್ರೇಕ್ಷಕರನ್ನು ಸೆಳೆಯಲು Buy 1 Get 1 ಫ್ರೀ ಟಿಕೆಟ್ ಆಫರ್ ನೀಡಿದ್ದಾರೆ.
ಗಾಂಧಿಜಯಂತಿ ರಜೆ ಹಿನ್ನೆಲೆಯಲ್ಲಿ ಈ ಆಫರ್ ನೀಡಿದ್ದು ಬುಕ್ ಮೈ ಶೋನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಈ ಭರ್ಜರಿ ಆಫರ್ ಸಿಗಲಿದೆ.
ಈಗಾಗಲೇ ವಾಕ್ಸಿನ್ ವಾರ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 3.25 ಕೋಟಿ ಗಳಿಸುವಲ್ಲಿ ಯಶಸ್ವಿಯಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ವಾಕ್ಸಿನ್ ವಾರ್ ಚಿತ್ರದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ನಿವೇದಿತಾ ಭಟ್ಟಾಚಾರ್ಯ ಸೇರಿದಂತೆ ಪ್ರಮುಖರು ನಟಿಸಿದ್ದಾರೆ.