Wednesday, November 19, 2025

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಆರೋಪಿ ಪತಿಗೆ 14 ದಿನ ನ್ಯಾಯಾಂಗ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಪತಿ ಮಹೇಂದ್ರ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ.

ವೈದ್ಯೆ ಪತ್ನಿ ಕೃತಿಕಾಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಿಕಾ ಪತ್ನಿ ಆರೋಪಿ ಡಾ.ಮಹೇಂದ್ರ ಅವರನ್ನು ಬೆಂಗಳೂರಿನ 29ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ಡಾ.ಮಹೇಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಹತ್ಯೆಗೈದ ಪತಿ ಡಾ.ಮಹೇಂದ್ರ ಜೈಲುಪಾಲಾಗಿದ್ದಾರೆ.

error: Content is protected !!