300 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದ ಡಾಕ್ಟರ್‌: ನಾನು ಶಿಶುಕಾಮಿ ಎಂದು ತಪ್ಪೊಪ್ಪಿಕೊಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಫ್ರಾನ್ಸ್‌ನ ವೈದ್ಯನೊಬ್ಬ 30 ವರ್ಷಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದ 300 ಮಕ್ಕಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಕೋರ್ಟ್‌ನಲ್ಲಿ ವಿಚಾರಣೆ ವೇಳೆ ತಾನೊಬ್ಬ `ಶಿಶುಕಾಮಿ’ ಎಂದು ಆತನೇ ಒಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.

ಆರೋಪಿ ವೈದ್ಯ ಜೋಯೆಲ್ ಲೇ ಸ್ಕಾನರ್ಕ್ (74) ವೆನಿಸ್ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.  ಪೊಲೀಸರು, ಅತ್ಯಾಚಾರ ಆರೋಪದಡಿ ವೈದ್ಯನ ಮನೆಯಲ್ಲಿ ಶೋಧ ನಡೆಸಿದಾಗ ಆತನೇ ಬರೆದಿರುವ ದಾಖಲೆಗಳು, ಫೋಟೋಗಳು, ವಿಡಿಯೋಗಳು ಸಿಕ್ಕಿವೆ. ಗಂಡು ಹಾಗೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆತನನ್ನು ವೆನಿಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಸ್ವತಃ ವೈದ್ಯನೇ ತಪ್ಪೊಪ್ಪಿಕೊಂಡು, ಕಳೆದ 30 ವರ್ಷದಿಂದ ಈ ಕೃತ್ಯ ಎಸಗಿದ್ದಾಗಿ ಹೇಳಿದ್ದಾನೆ. 2020ರಲ್ಲಿಯೂ 4 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಆತನಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!