ವೈದ್ಯರ ಡ್ರಗ್ಸ್ ಜಾಲ ಪ್ರಕರಣ: ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ ವೈದ್ಯರ ಡ್ರಗ್ಸ್ ಜಾಲ ಪ್ರಕರಣದಲ್ಲಿ (Drug Peddling) ಸಿಕ್ಕಿಬಿದ್ದ ಇಬ್ಬರು ವೈದ್ಯರು (Doctors) ಹಾಗೂ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು (Medical Students) ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿ ಅಮಾನತು ಮಾಡಿದೆ.

ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸಮೀರ್, ಮೆಡಿಕಲ್ ಸರ್ಜನ್ ಡಾ. ಮಣಿಮಾರನ್ ಮುತ್ತು ಅಮಾನತಾಗಿರುವ ವೈದ್ಯರು. ಡಾ. ಕಿಶೋರಿಲಾಲ್, ಡಾ. ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ. ರಿಯಾ ಚಡ್ಡ, ಡಾ. ಇರಾ ಬಾಸಿನ, ಡಾ. ಕ್ಷಿತಿಜ್ ಗುಪ್ತಾ, ಡಾ. ಹರ್ಷ ಕುಮಾರ್ ವಿ.ಎಸ್. ಅಮಾನತು ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು.

ಮಂಗಳೂರಿನಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ದಂಧೆ ಹಾಗೂ ಗಾಂಜಾ ಸೇವನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆಸ್ಪತ್ರೆಯಿಂದ ಅಮಾನತು ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!