ಸೋನಿಯಾ ಗಾಂಧಿ ಆರೋಗ್ಯದ ಕುರಿತು ಮಹತ್ವದ ಮಾಹಿತಿ ನೀಡಿದ ವೈದ್ಯರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯ ಹಿನ್ನೆಲೆಜನವರಿ 04ರಂದು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಆಸ್ಪತ್ರೆ ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸರ್ ಗಂಗಾರಾಮ್‌ ಆಸ್ಪತ್ರೆ ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿ ಅವರು ಶ್ವಾಸಕೋಶದಲ್ಲಿ ಸೋಂಕಿನಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ, ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರದಿಂದಲೇ ಸೋನಿಯಾ ಗಾಂಧಿ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಜ.04ರಂದು ಚಿಕಿತ್ಸೆಗಾಗಿ ದೆಹಲಿಯಲ್ಲಿರುವ ಸರ್ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!