ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ವೈದ್ಯರ ಎಡವಟ್ಟಿನಿಂದ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ಹೆರಿಗೆ ಮಾಡಿಸುವ ವೇಳೆ ಮಗುವಿನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಕೊಂಡಜ್ಜಿ ರಸ್ತೆಯಲ್ಲಿರುವ ಮಹಿಳೆಯೊಬ್ಬರು ಹೆರಿಗೆಗಾಗಿ ಅಡ್ಮಿಟ್ ಆಗಿದ್ದರು. ನಾರ್ಮಲ್ ಡೆಲಿವರಿ ಸಾಧ್ಯವಾಗದ ಕಾರಣ ವೈದ್ಯರು ಸಿಝೇರಿಯನ್‌ಗೆ ಸೂಚಿಸಿದ್ದಾರೆ.
ಈ ವೇಳೆ ಮಗುವಿನ ಗುಪ್ತಾಂಗವನ್ನು ಕತ್ತರಿಸಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಂದಮ್ಮ ಮೃತಪಟ್ಟಿದೆ.