ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅಪರಾಧಗಳಿಗೆ ಬಂಗಾಳ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಹೇಳಿದ್ದಾರೆ.
ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನೆಯಾಗಿದೆ.
ಕಳೆದ ಗುರುವಾರ ರಾತ್ರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಬಗ್ಗೆ ಮಾತನಾಡಿದ ಪ್ರಧಾನ್,ಈ ಘೋರ ಅಪರಾಧವನ್ನು ನಾವು ಎಷ್ಟು ಬಲವಾಗಿ ಖಂಡಿಸುತ್ತೇವೆ, ಅದು ಸಾಕಾಗುವುದಿಲ್ಲ. ಬಂಗಾಳ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಅದಕ್ಕೆ ಹೊಣೆಗಾರರಾಗಬೇಕು ಎಂದು ಹೇಳಿದರು.
ಮಹಿಳಾ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕ್ರೂರವಾಗಿ ಹತ್ಯೆಗೈದ ಆರೋಪಿ ಸಂಜಯ್ ರಾಯ್ ಕೃತ್ಯಗಳ ಬಗ್ಗೆ ಕೋಲ್ಕತ್ತಾ ಪೊಲೀಸರು ರೋಚಕ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ರಾಯ್ ಅವರು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು ಎಂದು ನಂಬಲಾಗಿದೆ. ಆತ ತನ್ನ ಬ್ಲೂಟೂತ್ ಹೆಡ್‌ಫೋನ್‌ಗಳನ್ನು ಅಪರಾಧದ ಸ್ಥಳದಲ್ಲಿ ಬಿಟ್ಟುಹೋಗಿದ್ದು ಆರೋಪಿ ಪತ್ತೆಗೆ ಇದು ಸಾಕ್ಷ್ಯವೊದಗಿಸಿತ್ತು.