ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಒಬ್ಬ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಬಂಧಿತನನ್ನು ನಾಡಿಯಾ ಜಿಲ್ಲೆಯ ಆರಂಗಟಾದ ನಿವಾಸಿ ಬಿಸ್ವಾಜಿತ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆತನು ಫೇಸ್‌ಬುಕ್ ಲೈವ್‌ಗಳಲ್ಲಿ ಆಗಾಗ ಕಾಣಿಸಿಕೊಂಡು ಸೇನೆ ಹಾಗೂ ಸಿಬ್ಬಂದಿಯನ್ನು ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡುತ್ತಿದ್ದನೆಂದು ತಿಳಿದುಬಂದಿದೆ. ನೆರೆಹೊರೆಯವರು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ, ಅಧಿಕಾರಿಗಳು ಕ್ರಮ ಕೈಗೊಂಡು ಆತನನ್ನು ಬಂಧಿಸಿದರು. ಶನಿವಾರ ಮಧ್ಯಾಹ್ನ ಆತನನ್ನು ನಾಡಿಯಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿಯೇ ಆತ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ.
ಈ ಆರೋಪಿಯು ಏಕೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದನು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಆದರೆ ಸೇನೆಗೆ ಅವಮಾನ ಮಾಡುವ ರೀತಿಯ ವರ್ತನೆ ಯಾವುದೇ ಕಾರಣಕ್ಕೂ ಸಹನೀಯವಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.