ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮದುರ್ಗದ ಕಸದಬುಟ್ಟಿಯಲ್ಲಿ ಹೆಣ್ಣುಮಗುವೊಂದು ಪತ್ತೆಯಾಗಿದೆ.
ಮುದೇನೂರ ಗ್ರಾಮದಲ್ಲಿ ಹೆಣ್ಣುಮಗು ಅಳುತ್ತಿರುವ ಸದ್ದು ಕೇಳಿದ ಗ್ರಾಮಸ್ಥರು ಮಗುವನ್ನು ರಕ್ಷಿಸಿದ್ದಾರೆ.
ಹೆತ್ತ ತಾಯಿಯೇ ಮಗುವನ್ನು ಬಟ್ಟೆಯಲ್ಲಿ ಸುತ್ತಿ ಕಸದ ತೊಟ್ಟಿಯಲ್ಲಿ ಬಿಸಾಡಿ ಹೋಗಿದ್ದಾಳೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಗುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಣ್ಣು ಮಗು ಎನ್ನುವ ಕಾರಣಕ್ಕೆ ತೊಟ್ಟಿಯಲ್ಲಿ ಹಾಕಿ ಹೋಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.