Sunday, January 11, 2026

ನಮ್ಮ ರಾಜ್ಯದಲ್ಲೂ ಇದೆಯಾ ಮಕ್ಕಳ ಜೀವ ತೆಗೆದ ಡೆಡ್ಲಿ ಕಫ್‌ ಸಿರಪ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಇಂದು ಈ ಬಗ್ಗೆ ಒಂದು ಮಾರ್ಗಸೂಚಿ ಕೂಡ ಬಿಡುಗಡೆ ಮಾಡುತ್ತೇವೆ. ಈ ಹಿಂದೆ ಆರೋಗ್ಯ ಸುರಕ್ಷತೆ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ. ಮಿನರಲ್ ವಾಟರ್ ತಯಾರಿಗೆ ಸಂಬಂಧ ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

error: Content is protected !!