ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಬಿಚ್ಚಿಟ್ಟಿದ್ದಾರೆ.
ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅತ್ತ ದೆಹಲಿಯಲ್ಲಿ ಯತ್ನಾಳ್, ಬಿಎಸ್ವೈ ಮಾತನ್ನು ಸ್ವಾಗತಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂದರು. ಈ ಮೂಲಕ ಬಿಎಸ್ವೈ ಪರೋಕ್ಷವಾಗಿ ಯತ್ನಾಳ್ ದಾರಿಗೆ ಬರಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.