ಹೊಸದಿಗಂತ ಡಿಜಿಟಲ್ ಡೆಸ್ಕ್:
ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 14 ನಿವೇಶನಗಳನ್ನು ಮಡಾಗೆ ವಾಪಸ್ ನೀಡುವ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಆರ್, ಅಶೋಕ್ ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದಿದ್ದಾರೆ.
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.… pic.twitter.com/eIkCuVpMgX
— R. Ashoka (@RAshokaBJP) September 30, 2024