ಹೆಣದ ಸುತ್ತ ನೊಣದಂತೆ ಕೂರುವ ಸರ್ಕಾರಕ್ಕೆ ಶಿಕ್ಷಕರ ಬೆಲೆ ಗೊತ್ತಿದ್ಯಾ? ಸಿದ್ದು ಗುಡುಗು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಮುಷ್ಕರದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಾದ ಸಿದ್ದಯ್ಯ ಹಿರೇಮಠ ಹಾಗೂ ಶಂಕರಪ್ಪ ಬೋರಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿಕ್ಷಕರ ಕಡೆ ಗಮನ ಹರಿಸಲು ಇನ್ನೆಷ್ಟು ಸಾವುಗಳು ಆಗಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 141ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಇದು ಸಿಎಂ ಕಣ್ಣಿಗೆ ಬೀಳೋದಿಲ್ಲ.

ಪಿಂಚಣಿಗಾಗಿ ಹಿರಿಯ ಶಿಕ್ಷಕರು ಮುಷ್ಕರದಲ್ಲಿ ನಿರತರಾಗಿದ್ದು, ಸರ್ಕಾರ ಸ್ಪಂದಿಸದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆ ಅನ್ನದೆ ಇನ್ನೇನು ಅನ್ನಬೇಕು?

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಸರ್ಕಾರ ಕೂರುತ್ತದೆ. ಆದರೆ ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಕ್ಕೆ ಬೆಲೆ ಇಲ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!