ಅಪರಾಧಿಗಳನ್ನು ಸರ್ಕಾರ ರಕ್ಷಿಸಲು ಬಯಸುತ್ತಿದೆಯೇ?: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ಕಿರುಕುಳ ಆರೋಪ ಪರ ಈಗಾಗಲೇ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಬೆಂಬಲ ನೀಡಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕಿ, ಈ ವಿಚಾರದಲ್ಲಿ ಅಪರಾಧಿಗಳನ್ನು ರಕ್ಷಿಸಲು ಸರ್ಕಾರ ಬಯಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ದೇಶದ ಗೌರವವನ್ನು ಹೆಚ್ಚಿಸುವ ಕ್ರೀಡಾಪಟುಗಳ ಮನವಿಯನ್ನು ನಿರ್ಲಕ್ಷಿಸಲಾಗುತ್ತಿದೆ , ಬಿಜೆಪಿ ಮತ್ತು ಅದರ ನಾಯಕರ ದುರಹಂಕಾರದಿಂದ ಖ್ಯಾತ ಕ್ರೀಡಾಪಟುಗಳ ಧ್ವನಿ ಹತ್ತಿಕ್ಕಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ ಪ್ರಿಯಾಂಗಾ ಗಾಂಧಿ, ಕ್ರೀಡಾ ಪಟುಗಳು ದೇಶದ ಹೆಮ್ಮೆ, ಅವರು ಹಲವು ಕಷ್ಟಗಳ ನಡುವೆಯೂ ಪದಕಗಳನ್ನು ಗೆದ್ದಾಗ “ಅವರ ಗೆಲುವು ನಮ್ಮ ಗೆಲುವು” ಎಂದು ಹೇಳಿ ಇಡೀ ದೇಶ ಸಂಭ್ರಮಿಸುತ್ತದೆ. ಮಹಿಳಾ ಆಟಗಾರ್ತಿಯರ ಗೆಲುವು ಉಳಿದವರಿಗಿಂತ ದೊಡ್ಡದಾಗಿದೆ. ಅವರು ಸಂಸತ್ತಿನ ಮುಂದಿನ ರಸ್ತೆಯಲ್ಲಿ ಕಣ್ಣೀರಿನೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ದೀರ್ಘಕಾಲದಿಂದ ನಡೆಯುತ್ತಿರುವ ಶೋಷಣೆಯ ವಿರುದ್ಧದ ಅವರ ಅಳಲನ್ನು ಯಾರೂ ಕೇಳುತ್ತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!