February 24, 2026
Tuesday, February 24, 2026
spot_img

ʼಉದ್ಯೋಗ ಸಿಗದವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಕೊಡ್ತಾ ಇದೀವಲ್ವಾ?ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿ ಎಂದು ಆಗ್ರಹಿಸಿ ಉದ್ಯೋಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದಾರೆ. ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಉದ್ಯೋಗ ಸಿಗದಿದ್ದಕ್ಕೆ ನಾವು ಗ್ಯಾರಂಟಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ ಎಂದು ಹೇಳಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ ಬೆಲ್ಲದ್‌, ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !