ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧನ ಮೇಲೆ ನಾಯಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ.

ಕರೋಪ್ಪಾಡಿ ಗ್ರಾಮದ ಲಕ್ಷ್ಮಣ ಎಂಬವರು ಯಾವುದೊ ವಿಚಾರಕ್ಕೆ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅವರು ಠಾಣೆಯಿಂದ ಬಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ನಾಯಿ ಕಳೆದ ಹಲವಾರು ಸಮಯಗಳಿಂದ ಠಾಣೆಯಲ್ಲಿ ಬೀಡುಬಿಟ್ಟಿದ್ದು, ಪೊಲೀಸ್ ಸಿಬ್ಬಂದಿಗಳು ತಿಂಡಿ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಇದೇ ರೀತಿಯಾಗಿ ನಾಯಿ ಠಾಣೆಗೆ ಬಂದವರ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!