Thursday, July 7, 2022

Latest Posts

ಶಾಲಾ ವಿದ್ಯಾರ್ಥಿಗಳ ಮೇಲೆ ನಾಯಿ ದಾಳಿ: ಆಸ್ಪತ್ರೆ ಸೇರಿದ ಮಕ್ಕಳು

ಹೊಸದಿಗಂತ ವರದಿ, ಸೋಮವಾರಪೇಟೆ:

ಶಾಲಾ ವಿದ್ಯಾರ್ಥಿಗಳ ಮೇಲೆ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಪುಟಾಣಿಗಳಿಬ್ಬರು ಆಸ್ಪತ್ರೆ ಸೇರಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆವರಣದಲ್ಲಿ ಪ್ರಾರ್ಥನೆಗೆ ಸಜ್ಜಾಗುತ್ತಿದ್ದ ವೇಳೆ ನಾಯಿಯೊಂದು ಏಕಾಏಕಿ ಮಕ್ಕಳ ಮೇಲೆ ದಾಳಿ ನಡೆಸಿ ಸಿಕ್ಕಿದವರನ್ನು ಕಚ್ಚಲಾರಂಭಿಸಿದೆ.
ಈ ಅನಿರೀಕ್ಷಿತ ಘಟನೆಯಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಓಡಲಾರಂಭಿಸಿದ್ದಾರೆ. ಆದರೂ ಮೂರನೇ ತರಗತಿಯ ಕಿಶನ್ ಹಾಗೂ ಒಂದನೇ ತರಗತಿಯ ಧ್ವನಿ ಎಂಬ ವಿದ್ಯಾರ್ಥಿಗಳ ಕಾಲು ಹಾಗೂ ತೊಡೆಯ ಭಾಗಕ್ಕೆ ನಾಯಿ ಕಚ್ಚಿದೆ.
ನಾಯಿ ದಾಳಿಯಿಂದ ಮಕ್ಕಳನ್ನು ರಕ್ಷಿಸಲು ಶಿಕ್ಷಕಿಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.
ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ಮಿಲ್ಡ್ರೆಡ್ ಗೊನ್ಸಾಲ್ವೆಸ್ ಪೊಲೀಸ್ ಹಾಗೂ ಪಟ್ಟಣ ಪಂಚಾಯತಿಗೆ ದೂರು ನೀಡಿದ್ದಾರೆ.
ಇದೇ ನಾಯಿ ಮಂಗಳವಾರ ಬೆಳಗ್ಗೆ ಕಕ್ಕೆಹೊಳೆ ಸಮೀಪ ಇಬ್ಬರಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪ ಇಬ್ಬರಿಗೆ ಸೇರಿದಂತೆ ಒಟ್ಟು ಆರು ಮಂದಿಗೆ ಕಚ್ಚಿದ್ದು, ನಾಲ್ಕೈದು ನಾಯಿಗಳಿಗೂ ಕಚ್ಚಿದೆ ಎನ್ನಲಾಗಿದೆ.
ಪಟ್ಟಣ ಪಂಚಾಯತ್ ಅಧ್ಯಕ್ಷ ಚಂದ್ರು, ಸದಸ್ಯರಾದ ಶೀಲಾ ಡಿಸೋಜ, ಮಹೇಶ್, ಎಸ್.ಮಹೇಶ್ ಹಾಗೂ ಮುಖ್ಯಾಧಿಕಾರಿ ನಾಚಪ್ಪ ಆಸ್ಪತ್ರೆಗೆ ತೆರಳಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿದರು.
ಪಟ್ಟಣದಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಪಟ್ಟಣ ಪಂಚಾಯಿತಿಯ ನಿರ್ಲಕ್ಷ್ಯದಿಂದ ಸಿಕ್ಕವರ ಮೇಲೆ ನಾಯಿ ಕಚ್ಚುವಂತಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss