Saturday, June 10, 2023

Latest Posts

ಬೀದಿ ನಾಯಿಗಳ ದಾಳಿ: ಐದು ಮಕ್ಕಳು ಆಸ್ಪತ್ರೆಗೆ ದಾಖಲು

ಹೊಸದಿಗಂತ ವರದಿ, ಕಲಬುರಗಿ:

ಮನೆಯ ಮುಂದೆ ಆಟವಾಡುತ್ತಿದ್ದ ಐದು ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡಿದ್ದು, ಮಕ್ಕಳನ್ನು ಕಚ್ಚಿ ಗಾಯಗೊಳಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಗರದ ತಾಜ್ ನಗರದಲ್ಲಿ ಬೆಳ್ಳಂಬೆಳಿಗ್ಗೆ ಬಿದಿ ನಾಯಿಗಳು ಏಕಾಏಕಿ ಮಕ್ಕಳ ಮೇಲೆ ದಾಳಿ ನಡೆಸಿವೆ.
ಗಾಯಗೊಂಡಿರುವ ಮಕ್ಕಳನ್ನು ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ಬಹುತೇಕ ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿಗಿದ್ದು,ಪಾಲಿಕೆ ಇದರ ಕಡೆಗೆ ಗಮನ ಹರಿಸುವ ಅವಶ್ಯಕತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!