ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೋಕಿಯೋ ಒಲಿಂಪಿಕ್ಸ್ ಚಾಂಪಿಯನ್, ಭಾರತದ ತಾರಾ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಮತ್ತೊಂದು ಸಾಧನೆಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಖತರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ ಫೈನಲ್ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ಟ್ರೋಫಿ ಗೆದ್ದಿದ್ದಾರೆ.
ನೀರಜ್ ಕಳೆದ ವರ್ಷ ಜ್ಯುರಿಚ್ನಲ್ಲಿ ನಡೆದಿದ್ದ ಡೈಮಂಡ್ ಲೀಗ್ ಫೈನಲ್ನಲ್ಲಿ ಚಾಂಪಿಯನ್ ಆಗಿ, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಗಳಿಸಿದ್ದರು.
ಈ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್ -2023 ಗೆದ್ದು ಹೆಮ್ಮೆಗೆ ಪಾತ್ರರಾಗಿದ್ದಾರೆ.