ನಾನು ಹಿಂದು ವಿರೋಧಿಯಲ್ಲ, ಹಿಂದುತ್ವದ ವಿರೋಧಿ-ಸಿದ್ದರಾಮಯ್ಯ

ಹೊಸದಿಗಂತ ವರದಿ ಹುಬ್ಬಳ್ಳಿ:‌ 

ಉತ್ತರ ಪ್ರದೇಶದ ಆಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಿಸಲು ನಮ್ಮ ವಿರೋಧವಿಲ್ಲ. ಈ ವಿಚಾರವಾಗಿ ಬಿಜೆಪಿ ನಾಯಕರು ರಾಜಕಾರಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ಧರ್ಮ ಹಾಗೂ ಜಾತಿ ಹೆಸರಲ್ಲಿ ರಾಜಕೀಯ ಮಾಡುವುದು ತಪ್ಪು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಲು ಹಾಗೂ ರಾಜಕೀಯವಾಗಿ ಬಳಸಿಕೊಳ್ಳವುದು ಸರಿಯಲ್ಲ. ಪ್ರತಿ ಹಳ್ಳಿಯಲ್ಲಿ ರಾಮ ಹಾಗೂ ಆಂಜನೇಯ ಮಂದಿರಗಳಿವೆ. ನಾವು ಸಹ ರಾಮಮಂದಿರ ಕಟ್ಟಲು ಧನಸಹಾಯ ಮಾಡಿದ್ದೇವೆ ಎಂದರು.

ಕೋಮುವಾದ ಮಾಡುವ ಯಾವುದೇ ಪಕ್ಷಗಳು ಜನರನ್ನು ಆಳಲು ಯೋಗ್ಯವಲ್ಲ. ಧರ್ಮ ಹಾಗೂ ಜಾತಿ ಹೆಸರಲ್ಲಿ ರಾಜಕೀಯ ಮಾಡಿದರೇ ಅದು ತಪ್ಪು. ಸಮಾಜದಲ್ಲಿ ಹಿಂದೂ, ಮುಸ್ಲಿ‌ಂ, ಕ್ರೈಸ್ತ ಸೇರಿದಂತೆ ಎಲ್ಲ ಧರ್ಮಗಳು ಸಮಾವಾಗಿವೆ. ಇವುಗಳ ಹೆಸರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ನಾನು ಹಿಂದೂ ವಿರೋಧಿಯಲ್ಲಿ ಹಿಂದೂತ್ವದ ವಿರೋಧಿಯಾಗಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!