ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಬಯೋಕಾನ್ ಫೌಂಡೇಷನ್‌ನ ಸಿಎಸ್‌ಆರ್ ಅಡಿಯಲ್ಲಿ ಚಿತ್ರಿಸಲಾಗಿದೆ.
ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ. ‘ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ’ ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಲಾಗಿದೆ.
ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್‌ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್, ಟೈಲರ್‌ಗಳು, ಪ್ಲಂಬರ್ಸ್, ವೈದ್ಯರು, ದಾದಿಯರು, ಸಂಗೀತಗಾರರು, ವಿಜ್ಞಾನಿಗಳು, ಐಟಿ ವೃತ್ತಿಪರರು, ಏರೋಸ್ಪೇಸ್ ಸೇರಿದಂತೆ ನಮ್ಮ ಪ್ರತಿನಿತ್ಯದ ಜೀವನದ ಭಾಗವಾಗಿರುವ ಎಲ್ಲಾ ಪಾತ್ರದಾರಿಗಳ ಚಿತ್ರವನ್ನು ಚೆನ್ನಪಟ್ಟಣದ ಗೊಂಬೆಗಳಂತೆ ಸುಂದರವಾದ ಕೆತ್ತನೆಯ ರೀತಿಯಲ್ಲಿ ಚಿತ್ರಿಸಲಾಗಿದೆ.