ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ʼಡೊಳ್ಳು’ ಚಿತ್ರ ಆಯ್ಕೆ; ಮೇ 10ಕ್ಕೆ ಪ್ರದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಪವನ್ ಒಡೆಯರ್ ನಿರ್ಮಿಸಿರುವ ಡೊಳ್ಳು ಚಿತ್ರವು ಪ್ರತಿಷ್ಟಿತ ಹ್ಯಾಬಿಟಾಟ್ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಆಯ್ಕೆಯಾಗಿದೆ. ಮೇ 10 ರಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಚಲನಚಿತ್ರೋತ್ಸವದಲ್ಲಿ ಡೊಳ್ಳು ಪ್ರದರ್ಶನಗೊಳ್ಳಲಿದೆ.
ಜನಪ್ರಿಯ ಜಾನಪದ ಕಲಾ ಪ್ರಕಾರ ʼಡೊಳ್ಳುʼ ಕುಣಿತವನ್ನು ಆಧರಿಸಿ ನಿರ್ಮಾಣವಾಗಿರುವ ಚಿತ್ರವು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತದೆ. ಈಗಾಗಲೇ ಢಾಕಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತು ಡಲ್ಲಾಸ್ ಅಡಿ ವರ್ತ್ ಸೌತ್ ಏಷ್ಯನ್ ಫಿಲ್ಮ್ ಫೆಸ್ಟಿವಲ್ (ವರ್ಚುವಲ್)ನಲ್ಲಿ ಪ್ರದರ್ಶನಕ್ಕೆ ಚಿತ್ರವು ಆಯ್ಕೆಯಾಗಿದೆ.
ಈ ಚಿತ್ರವು ರಾಜಸ್ಥಾನದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ತೀರ್ಪುಗಾರರ ಪ್ರಶಸ್ತಿ, ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದುಕೊಟ್ಟಿದೆ.
ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕೆಲಿಡೋಸ್ಕೋಪ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಹ ಅತ್ಯುತ್ತಮ ಭಾರತೀಯ ಚಲನಚಿತ್ರವನ್ನು ಗೆದ್ದುಕೊಂಡಿದೆ. ಚೆನ್ನೈನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಒಂಬತ್ತು ಭಾರತೀಯ ಚಲನಚಿತ್ರಗಳಲ್ಲಿ ಡೊಳ್ಳು ಕೂಡ ಸೇರಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಾಗರ್ ಪುರಾಣಿಕ್ ಅವರ ಚೊಚ್ಚಲ ಚಿತ್ರ ಡೊಳ್ಳು. ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಂತ್ ಕಾಮತ್ ಸಂಗೀತ ನೀಡಿದ್ದು, ಅಭಿಲಾಷ್ ಕಲತಿ ಕ್ಯಾಮರಾ ವರ್ಕ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!