ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಡಾಲಿ ಧನಂಜಯ ಅವರನ್ನು ಲಿಡ್ಕರ್ ಬ್ರ್ಯಾಂಡ್ ಅಂಬಾಸಿಡರ್ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನಚನ್ನು ಆಚರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಡಾಲಿ ಧನಂಜಯ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಲಿಡ್ಕರ್ ಬ್ರ್ಯಾಂಡ್ ಅಂಬಾಸಿಡರ್ ಡಾಲಿ ಧನಂಜಯ್ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕನ್ನಡ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಡಾಲಿ ಅವರು ಸರ್ಕಾರದ ಲಿಡ್ಕರ್ ಬ್ರ್ಯಾಂಡ್‌ಗೆ ರಾಯಭಾರಿ ಆಗಿರುವುದು ಅಭಿಮಾನಿಗಳಿಗೆ ಸಂತಸ ನೀಡಿದೆ.