ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ ನೀಡಿದ್ದಾರೆ. ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಸಿದ್ದಗಂಗಾ ಶ್ರೀಗಳಿಗೆ ಡಾಲಿ ಆಹ್ವಾನ ನೀಡಿದ್ದಾರೆ.
ಮಠಕ್ಕೆ ಭೇಟಿ ನೀಡಿದ ನಟ, ಮೊದಲು ಶಿವಕುಮಾರ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಲಗ್ನ ಪತ್ರಿಕೆ ಪೂಜೆ ಮಾಡಿಸಿದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.