ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿಸಿದೆ.
ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಆಸೆ ಇರುತ್ತದೆ. ಇದರ ಸುತ್ತಮುತ್ತ ಕಥೆ ಹೆಣೆಯಲಾಗಿದೆ.
ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಇದೇ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.