ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟರಾಕ್ಷಸ ಡಾಲಿ ಧನಂಜಯ ಫೆ.16ರಂದು ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಈ ಹಿನ್ನೆಲೆ ಇಂದು ಕಿಚ್ಚ ಸುದೀಪ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನು ಭೇಟಿಯಾಗಿ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ಡಾಲಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಜ.11ರಂದು ಮೋಹಕತಾರೆ ರಮ್ಯಾಗೆ ಮದುವೆ ಪತ್ರಿಕೆ ನೀಡಿದ ಬೆನ್ನಲ್ಲೇ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ರಮೇಶ್ ಅರವಿಂದ್, ‘ಬಿಗ್ ಬಾಸ್’ ಖ್ಯಾತಿಯ ರಾಜೀವ್ ಸೇರಿದಂತೆ ಅನೇಕರಿಗೆ ಇಂದು ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ.