ದೇಶೀಯ ಕ್ರೂಸ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಡಿಶಾದ ಕರಾವಳಿಯಲ್ಲಿ ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ(ಐಟಿಸಿಎಂ) ಪರೀಕ್ಷಾರ್ಥ ಪ್ರಯೋಗವನ್ನು ಗುರುವಾರ ಯಶಸ್ವಿಯಾಗಿ ನೆರವೇರಿಸಲಾಯಿತು.

ಈ ಕುರಿತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್‌ಡಿಒ) ಮಾಹಿತಿ ನೀಡಿದ್ದು, ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ನಿರೀಕ್ಷೆಯಂತೆ, ಕ್ಷಿಪಣಿಯ ಎಲ್ಲ ವ್ಯವಸ್ಥೆಗಳ ಕಾರ್ಯವು ಸಮರ್ಪಕವಾಗಿ ಇರುವುದು ಕಂಡುಬಂತು’ ಎಂದು ತಿಳಿಸಿದೆ.

‘ಬೆಂಗಳೂರು ಮೂಲದ ಗ್ಯಾಸ್‌ ಟರ್ಬೈನ್ ರಿಸರ್ಚ್‌ ಎಸ್ಟಾಬ್ಲಿಷ್‌ಮೆಂಟ್‌(ಜಿಟಿಆರ್‌ಇ) ಅಭಿವೃದ್ಧಿಪಡಿಸಿರುವ ಪ್ರೊಪಲ್ಷನ್ ವ್ಯವಸ್ಥೆಯನ್ನು ಈ ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ. ಪ್ರೊಪಲ್ಷನ್‌ ವ್ಯವಸ್ಥೆಯ ಕಾರ್ಯವನ್ನು ಸಹ ಈ ಪರೀಕ್ಷೆ ದೃಢೀಕರಿಸಿದೆ’ ಎಂದು ಡಿಆರ್‌ಡಿಒ ತಿಳಿಸಿದೆ.

ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಏರೋನಾಟಿಕಲ್ ಡೆವಲೆಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ಎಡಿಇ) ಅಭಿವೃದ್ಧಿಪಡಿಸಿದೆ. ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ.

ರಾಡಾರ್‌, ಇಒಟಿಎಸ್‌ ಹಾಗೂ ಟೆಲಿಮೆಟ್ರಿಯಂತಹ ಸಂವೇದಕಗಳ ಮೂಲಕ ಈ ಕ್ಷಿಪಣಿ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲಾಗಿತ್ತು. ಈ ಸಂವೇದಕಗಳಲ್ಲದೇ, ಸುಖೋಯ್‌-30-ಎಂಕೆಐ ಯುದ್ಧವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು ಎಂದು ತಿಳಿಸಿದೆ.

ರಾಜನಾಥ್‌ ಸಿಂಗ್‌ ಅಭಿನಂದನೆ
ಐಟಿಸಿಎಂಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಡಿಆರ್‌ಡಿಒ ಅನ್ನು ಅಭಿನಂದಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!