ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್‌ ಗಳ ಬೆಲೆ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದಿನಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಗಳ ಬೆಲೆ ಏರಿಸಲಾಗಿದೆ. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 1,000 ರೂ. ದಾಟಿದೆ. ಅಲ್ಲದೇ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ದರವವನ್ನೂ ಸಹ ಏರಿಕೆ ಮಾಡಲಾಗಿದೆ. ಇಂದು (ಗುರುವಾರ)ದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3 ರೂಪಾಯಿ 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ ನಷ್ಟು ಏರಿಸಲಾಗಿದೆ. ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಲಿದೆ. ಈ ಮೊದಲು 999.50 ರೂಪಾಯಿಗಳಾಗಿತ್ತು.
ಈ ಮೂಲಕ ಒಂದೇ ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಎರಡನೇ ಬಾರಿ ಏರಿಕೆ ಕಂಡಂತಾಗಿದೆ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಬೆಲೆ ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನೂ ಹೆಚ್ಚಳ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!