ಮನೆಕೆಲಸದವರಿಂದ ಮಾಲಕಿ, ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾ*ಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಯಲ್ಲಿ ಕೆಲಸ ಮಾಡುತ್ತಿದ್ದವರೇ ಮಾಲಕಿ ಹಾಗೂ ಅವರ ಅಪ್ರಾಪ್ತ ವಯಸ್ಕ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ.

ಸಂತ್ರಸ್ತೆ ಮಹಿಳೆ ಶನಿವಾರ ಬಡಗಡ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದು, ಆರೋಪಿ ಸರೋಜ್ ಕುಮಾರ್ ಬೆಹೆರಾನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕೆಲಸ ಮಾಡುವಾಗ, ಆರೋಪಿಯು ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿಕೊಂಡು ಅವರನ್ನು ಬ್ಲ್ಯಾಕ್‌ಮೇಲ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ.

ಆರೋಪಿಯು ಕಳೆದ ಕೆಲವು ವಾರಗಳಿಂದ ಅವರ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಅವರ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ತನಿಖೆಯ ಸಮಯದಲ್ಲಿ ಆರೋಪಿಯ ಹೆಸರಿನಲ್ಲಿ ಜಾಜ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಒಂದು ಪ್ರಕರಣವಿರುವುದು ಪೊಲೀಸರಿಗೆ ಕಂಡುಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!