ಪ್ರಧಾನಿ ನರೇಂದ್ರ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆರಿಬಿಯನ್ ಪ್ರವಾಸದ ಮೊದಲು, ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ನೀಡಿದ ಅಗಾಧ ಕೊಡುಗೆಗಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಗೌರವವನ್ನು ಘೋಷಿಸಿದೆ.

ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ಅವರು ನೀಡಿದ ಕೊಡುಗೆಗಳನ್ನು ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಿದೆ ಎಂದು ವರದಿಯಾಗಿದೆ.

ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿಯು ಈ ಘೋಷಣೆಯನ್ನು ಮಾಡಿದ್ದು, ಕಾಮನ್‌ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಸಿಲ್ವಾನಿ ಬರ್ಟನ್ ಭಾರತ-ಕ್ಯಾರಿಕಾಮ್ ಶೃಂಗಸಭೆ 2024ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!