ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ 47ನೇ ಅಧ್ಯಕ್ಷರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪತ್ರವನ್ನು ಬರೆದಿದ್ದಾರೆ.
ಮೋದಿ ಅವರ ಪರವಾಗಿ ಆ ಪತ್ರವನ್ನು ತೆಗೆದುಕೊಂಡು ಹೋಗಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದ ನೂತನ ಅಧ್ಯಕ್ಷ ಟ್ರಂಪ್ ಅವರಿಗೆ ಹಸ್ತಾಂತರಿಸಲಿದ್ದಾರೆ.
ಇಂದು ನಡೆಯಲಿರುವ ಅಧ್ಯಕ್ಷ ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ವಿಶೇಷ ರಾಯಭಾರಿಯಾಗಿ ಜೈಶಂಕರ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿದೇಶಾಂಗ ಸಚಿವರ ಉಪಸ್ಥಿತಿಯು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಸರ್ಕಾರದ ಮುಖ್ಯಸ್ಥರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ವಿಶೇಷ ರಾಯಭಾರಿಗಳನ್ನು ಕಳುಹಿಸುವ ಭಾರತದ ಸಾಮಾನ್ಯ ಪದ್ಧತಿಯ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.