ಹೊಸದಿಗಂತ ಡಿಜಿಟಲ್ ಡೆಸ್ಕ್:
ಲ್ಯಾಟಿನ್ ಅಮೆರಿಕಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ನಡುವೆ, ಅಮೆರಿಕ ವೆನೆಜುವೆಲಾದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ನಸುಕಿನ ಜಾವ ಸ್ಥಳೀಯ ಕಾಲಮಾನ ಪ್ರಕಾರ ಸುಮಾರು 2 ಗಂಟೆಗೆ ರಾಜಧಾನಿ ಕ್ಯಾರಕಾಸ್ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಅಮೆರಿಕದ ವಾಯುಸೇನೆ ಏರ್‌ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.
ಈ ದಾಳಿಯನ್ನು ಅಮೆರಿಕ ಆಡಳಿತ ಖಚಿತಪಡಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಂತೆ ವೆನೆಜುವೆಲಾದೊಳಗಿನ ಮಿಲಿಟರಿ ಸೌಲಭ್ಯಗಳು ಮತ್ತು ಇತರ ಮುಖ್ಯ ಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಕನಿಷ್ಠ ಏಳು ಭಾರೀ ಸ್ಫೋಟಗಳು ಸಂಭವಿಸಿದ್ದು, ಕ್ಯಾರಕಾಸ್‌ನ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಇದನ್ನೂ ಓದಿ:
ವೆನೆಜುವೆಲಾದ ರಕ್ಷಣಾ ಸಚಿವ ವ್ಲಾಡಿಮಿರ್ ಪ್ಯಾಡ್ರಿನೊ ಲೋಪೆಜ್ ಅವರ ನಿವಾಸದ ಸುತ್ತಮುತ್ತಲೂ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವೆನೆಜುವೆಲಾ ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿದೆ ಎಂದು ಟ್ರಂಪ್ ಆಡಳಿತ ಹಿಂದಿನಿಂದಲೂ ಆರೋಪಿಸುತ್ತಾ ಬಂದಿದೆ. ಮಡುರೊ ಸರ್ಕಾರ ಈ ವಿಚಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದ ಹಿನ್ನೆಲೆ ಇದೆ. ಈ ಎಚ್ಚರಿಕೆಯ ಬೆನ್ನಲ್ಲೇ ದಾಳಿ ನಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

