ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗುತ್ತಿದ್ದು, ರಿಪಬ್ಲಿಕನ್ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಂಭಾವ್ಯ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಜೊತೆ ಚರ್ಚೆ ಅಥವಾ ಸಂವಾದಕ್ಕೆ ನಿರಾಕರಿಸಿದ್ದಾರೆ.
ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಗಳ ನಡುವಿನ ಚರ್ಚೆ ಕೇಂದ್ರಬಿಂದುವಾಗಿರಲಿದೆ. ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ಡೊನಾಲ್ಡ್ ಟ್ರಂಪ್, ಡೆಮಾಕ್ರಾಟ್ ಗಳು ತಮ್ಮ ಅಧಿಕೃತ ಅಭ್ಯರ್ಥಿ ಬಗ್ಗೆ ನಿರ್ಧಾರ ಕೈಗೊಳ್ಳುವವರೆಗೂ ತಾವು ಕಮಲಾ ಹ್ಯಾರಿಸ್ ಜೊತೆ ಚರ್ಚೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.