ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಂಟ್ವಾಳ ತಾಲೂಕಿನ ಮಂಚಿ ಶ್ರೀಕೃಷ್ಣ ಮಿತ್ರಮಂಡಳಿ ರಿ ಕೊಳ್ನಡು ವತಿಯಿಂದ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 170 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶಾಂತಲಾ ಎಂ ಭಟ್ ವಹಿಸಿದ್ದರು.
ಸಭೆಯಲ್ಲಿ ಶ್ರೀಕೃಷ್ಣ ಮಿತ್ರಮಂಡಳಿಯ ಅಧ್ಯಕ್ಷರಾದ ವೆಂಕಪ್ಪ ಶೆಟ್ಟಿ ಮಂಚಿ ಭಾವ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಮಂಚಿ ಭಾವ ಹಾಗೂ ಶಾಲಾ ಮುಖ್ಯೋಪಾಧ್ಯಾಯಲೋಕನಾಥ ಬಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಲೋಕನಾಥ ಬಿ ಸ್ವಾಗತಿಸಿದ. ರು ಶ್ರೀಕೃಷ್ಣ ಮಿತ್ರಮಂಡಳಿಯ ಸದಸ್ಯ ಬಾಲಕೃಷ್ಣ ಶೆಟ್ಟಿ ಖಂಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಾಪಕಚಂದ್ರಮೋಹನ್ ವಂದಿಸಿದರು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳ ಪೋಷಕರಿಗೆ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯ ಕ್ರಮದಲ್ಲಿ ಶಾಲಾ ಅಧ್ಯಾಪಕರು ಶ್ರೀಕೃಷ್ಣ ಮಿತ್ರ ಮಂಡಳಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.