ರಾಹುಲ್ ಗಾಂಧಿಯಂತೆ ವರ್ತಿಸಬಾರದು: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ವಾಸ್ತವಾಂಶಗಳೊಂದಿಗೆ ಎದುರಿಸಬೇಕು ಮತ್ತು ಸಂಸದರು ಅವರಂತೆ ವರ್ತಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಸಂಸದರಿಗೆ ಹೇಳಿದ್ದಾರೆ.

ಸತತ ಮೂರನೇ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಎನ್‌ಡಿಎ ಸಂಸದರನ್ನುದ್ದೇಶಿಸಿ ಮಾತನಾಡಿದ ಮೋದಿ, ಸಂಸದೀಯ ನಿಯಮಗಳು ಮತ್ತು ನಡವಳಿಕೆಯನ್ನು ಅನುಸರಿಸುವಂತೆ, ಉತ್ತಮ ಅಭ್ಯಾಸಗಳನ್ನು ಹಿರಿಯ ಸದಸ್ಯರಿಂದ ಕಲಿಯುವಂತೆ ಸೂಚಿಸಿದರು.

ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಮೋದಿ ಹೊಸ ಸಂಸದರಿಗೆ ಸಲಹೆ ನೀಡಿದರು. ಸಂಸತ್ತಿಗಿಂತ ಕಲಿಯಲು ಉತ್ತಮ ಸ್ಥಳವಿಲ್ಲ ಮತ್ತು ಮಹಾನ್‌ ನಾಯಕರ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರ ಅನುಭವವನ್ನು ಅರಿತುಕೊಳ್ಳಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ನೆರವಾಗುತ್ತದೆ ಎಂದು ತಿಳಿಸಿದರು.

ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಮೊದಲು ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕು. ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಮೋದಿ ಕಿವಿ ಮಾತು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!