ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.
ಥಾವರ್‌ಚಂದ ಗೆಹ್ಲೋಟ್ ಅವರಿಗೆ ಪತ್ರ ಬರೆದು ಒಪ್ಪಿಗೆ ನೀಡದಂತೆ, ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ.
ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಈ ಮೂಲಕ ವಿನಂತಿಸಿದ್ದಾರೆ.