ಹಾರಲು ಅನುಮತಿ ಕೇಳಬೇಡಿ, ರೆಕ್ಕೆಗಳು ನಿಮ್ಮವು, ಆಕಾಶ ಯಾರಿಗೂ ಸೇರಿಲ್ಲ: ಖರ್ಗೆಗೆ ತರೂರ್ ಕೌಂಟರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

‘ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು’ ಎಂದು ಟೀಕಿಸಿದ್ದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಗೆ ಪಕ್ಷದ ನಾಯಕ ಶಶಿ ತರೂರ್ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಶಶಿ ತರೂರ್ ಅವರನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ ಕೆಲವೇ ಗಂಟೆಗಳ ನಂತರ, ತಿರುವನಂತಪುರಂ ಸಂಸದರು X ನಲ್ಲಿ ಮಾಡಿರುವ ಪೋಸ್ಟ್ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಶಶಿ ತರೂರ್ ಅವರ ಪೋಸ್ಟ್ ನಲ್ಲಿ “ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. ಮತ್ತು ಆಕಾಶ ಯಾರಿಗೂ ಸೇರಿಲ್ಲ” ಎಂದು ಪಕ್ಷಿಯ ಛಾಯಾಚಿತ್ರದೊಂದಿಗೆ ಸಂದೇಶವನ್ನು ಪ್ರಕಟಿಸಿದ್ದಾರೆ.

ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮಗೆ ದೇಶ ಮೊದಲು. ಆದರೆ, ಕೆಲವರಿಗೆ ಮೋದಿಯೇ ಮೊದಲು” ಎಂದು ಶಶಿ ತರೂರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಹಾಗೇ, “ಶಶಿ ತರೂರ್ ಇಂಗ್ಲಿಷ್‌ನಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ. ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

https://x.com/ShashiTharoor/status/1937816207794508243?ref_src=twsrc%5Etfw%7Ctwcamp%5Etweetembed%7Ctwterm%5E1937816207794508243%7Ctwgr%5E2f740d369e660afcfeda0dfa052dbbfdce68f5e6%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2025%2FJun%2F25%2Fshashi-tharoors-dont-ask-permission-post-after-kharges-pm-swipe

ಅದಾದ ಸ್ವಲ್ಪ ಹೊತ್ತಿನಲ್ಲೇ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್ ಕೂಡ ಅದೇ ರೀತಿ ಪರೋಕ್ಷವಾಗಿ ನಿಗೂಢ ಅರ್ಥದ ಸಾಲುಗಳನ್ನು ಬರೆದಿದ್ದಾರೆ. “

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!