ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
‘ನನ್ನ ಹೋರಾಟ ಭೇದ-ಭಾವ, ಅಸಮಾನತೆಗಳ ವಿರುದ್ಧವೇ ಹೊರತು ಯಾವುದೇ ಜಾತಿ, ಜನಾಂಗದ ವಿರುದ್ಧವಲ್ಲ. ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ನಟ ಚೇತನ್ ಹೇಳಿದ್ದಾರೆ.
ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣ ಸಂಬಂಧ ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಬುಧವಾರ ವಿಚಾರಣೆಗೆ ಹಾಜರಾದ ಚೇತನ್, ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಾನು ಜಾತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಹುಟ್ಟಿದ ತಕ್ಷಣವೇ ಶ್ರೇಷ್ಠ ಹಾಗೂ ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಯಲಿದೆ. ಪ್ರಕರಣದ ತನಿಖೆಗೆ ಸಹಕರಿಸುತ್ತೇನೆ’ ಎಂದು ಹೇಳಿದರು.
ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಬರುವಂತೆ ಚೇತನ್ ಅವರಿಗೆ ನೋಟಿಸ್ ನೀಡಿದ್ದರು.