Tuesday, June 28, 2022

Latest Posts

ಹೆದರ ಬೇಡಿ, ಜಾಗೃತರಾಗಿರಿ! ನಿನ್ನೆ ಒಂದೇ ದಿನ 3 ಲಕ್ಷಕ್ಕೂ ಅಧಿಕ ಕೊರೋನಾ ಸೋಂಕಿತರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ನಿನ್ನೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ನಿನ್ನೆ ಒಂದೇ ದಿನ 3,68,147 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ನಿನ್ನೆ ದೇಶದಲ್ಲಿ 3,68,147 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ಇದರಲ್ಲಿ 34,13,642 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ದೇಶದಲ್ಲಿ 3,00,732 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 16,29,3003ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 3,417 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು 2,18,959 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss