ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಹೆಸರಿನಲ್ಲಿ ಕರೆ ಹಾಗೂ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ನಟಿ ರುಕ್ಮಿಣಿ ವಸಂತ್ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಕರೆ ಮಾಡುತ್ತಿರುವ ಸಂಖ್ಯೆಯನ್ನೂ ಬಹಿರಂಗವಾಗಿ ಪೋಸ್ಟ್ ಮಾಡಿರುವ ರುಕ್ಮಿಣಿ, ನನ್ನ ಹೆಸರಿನಲ್ಲಿ ನಕಲಿ ಕರೆ ಮತ್ತು ಮಸೇಜ್ ಮಾಡುತ್ತಿದ್ದಾರೆ. ಅದಕ್ಕೆ ಉತ್ತರಿಸಬೇಡಿ ಎಂದು ಮನವಿ ಮಾಡಿದ್ದಾರೆ.
ನನ್ನ ಹೆಸರಿನಲ್ಲಿ 9445893273 ಸಂಖ್ಯೆಯಿಂದ ಇತರರಿಗೆ ಕರೆ ಮತ್ತು ಮೆಸೇಜ್ ಮಾಡಲಾಗುತ್ತಿದೆ. ಈ ಮೊಬೈಲ್ ಸಂಖ್ಯೆಯಿಂದ ಬರುವ ಕರೆ ಅಥವಾ ಸಂದೇಶಕ್ಕೆ ಪ್ರತಿಕ್ರಿಯೆ ನೀಡಬೇಡಿ ಎಂದು ಕೇಳಿಕೊಂಡಿದ್ದಾರೆ.
ಏನೇ ವಿಷಯವಿದ್ದರೂ ನನ್ನದೊಂದಿಗೆ ಮಾತಾಡಿ, ಮೋಸ ಹೋಗಬೇಡಿ. ನನ್ನ ಹೆಸರಿನಲ್ಲಿ ಕರೆ ಮತ್ತು ಸಂದೇಶ ಕಳುಹಿಸುವವರು ಸೈಬರ್ ಅಪರಾಧಿಗಳು, ಅವರಿಗೆ ಖಂಡಿತಾ ಶಿಕ್ಷೆ ಇದ್ದೇ ಇರುತ್ತದೆ. ಅವರ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪುಟ್ಟಿ ಫೋನ್ ಮಾಡಿದ್ದಾರಂತ ಖುಷಿ ಪಡ್ಬೇಡಿ! ಇದೆಲ್ಲಾ ಬಿಗ್ ಸ್ಕ್ಯಾಮ್

