ಸಮನ್ಸ್ ಗೆ ಡೋಂಟ್ ಕೇರ್: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಹೊಸ ದೂರು ದಾಖಲಿಸಿದ ಇಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ.

ಈ ಹೊಸ ದೂರಿನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‌ಗಳನ್ನು ಗೌರವಿಸಿಲ್ಲ ಎಂದು ಇಡಿ ಆರೋಪಿಸಿದೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳಿಗೆ ಹಾಜರಾಗದ ದೆಹಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ಇಡಿ ಈ ಹಿಂದೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಮಾರ್ಚ್ 16 ರಂದು ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!